ಮಡಿಕೇರಿ, ಡಿ. 7: ಕೊಡಗು ಜಿಲ್ಲಾ ಪದವಿ ಪÀÇರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪದವಿ ಪÀÇರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ತಾ. 8 ರಂದು ನಗರದ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಪದವಿಪÀÇರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಕೆ.ಎಂ. ಭವಾನಿ ಮಾತನಾಡಿ, ಈ ಬಾರಿ ಕೊಡಗು ಜಿಲ್ಲೆ ಪದವಿಪÀÇರ್ವ ಶಿಕ್ಷಣದಲ್ಲಿ ರಾಜ್ಯಕ್ಕೆ 3ನೇ ಸ್ಥಾನವನ್ನು ಪಡೆದುಕೊಂಡಿದೆ ಎಂದರು.
ಜಿಲ್ಲೆಯ ಎಲ್ಲಾ ಶಿಕ್ಷಕರು ಒಂದೆಡೆ ಸೇರಿ ಚರ್ಚಿಸಿ ವಿದ್ಯಾಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಪ್ರಥಮ ಅಥವಾ ದ್ವಿತೀಯ ಸ್ಥಾನಕ್ಕೆ ಕೊಂಡೊಯ್ಯಲು ಅಗತ್ಯವಾದ ಕಾರ್ಯಯೋಜನೆಯನ್ನು ಸಮ್ಮೇಳನದಲ್ಲಿ ರೂಪಿಸಲಾಗುವದೆಂದರು.
ಶೈಕ್ಷಣಿಕ ಸಮ್ಮೇಳವನ್ನು ಬೆಳಿಗ್ಗೆ 10.30ಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಕೆ.ಎಂ. ಭವಾನಿ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಪ್ರಾಧ್ಯಾಪಕರು ಮತ್ತು ಜಾನಪದ ತಜ್ಞ ಡಾ. ಪಿ.ಕೆ. ರಾಜಶೇಖರ್ ಭಾಗವಹಿಸಲಿದ್ದಾರೆಂದರು. ಅಂದು ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಅಧ್ಯಕ್ಷತೆಯನ್ನು ಪ.ಪÀÇ. ಕಾಲೇಜು ಉಪನ್ಯಾಸಕರುಗಳ ಸಂಘದ ಅಧ್ಯಕ್ಷ ಸಿ.ಎನ್. ವಿಶ್ವನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈಕೋರ್ಟ್‍ನ ನಿಕಟ ಪÀÇರ್ವ ರಾಜ್ಯ ಸರ್ಕಾರದ ಅಭಿಯೋಜಕ ಹೆಚ್.ಎಸ್. ಚಂದ್ರಮೌಳಿ, ಕುಶಾಲನಗರ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ, ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ನಿಕಟ ಪÀÇರ್ವ ಅಧ್ಯಕ್ಷ ಜಿ. ಕೆಂಚಪ್ಪ, ಪ್ರಾಂಶುಪಾಲರ ಸಂಘದ ಕಾರ್ಯದರ್ಶಿಗಳಾದ ಸಿ.ಎಂ. ಮಹಾಲಿಂಗಯ್ಯ, ಖಜಾಂಚಿಗಳಾದ ಎಸ್.ಟಿ. ಪುರುಷೋತ್ತಮ, ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷರಾದ ಕೆ.ಜಿ. ಅಶ್ವಿನಿ ಕುಮಾರ್, ಪ್ರಧಾನ ಕಾರ್ಯದರ್ಶಿ ಫಿಲಿಪ್ ವಾಸ್, ಖಜಾಂಚಿ ಹೇಮಂತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಹೆಚ್.ಜೆ. ನಾಗರಾಜ್ ಪಾಲ್ಗೊಳ್ಳಲಿದ್ದಾರೆ ಎಂದು ಕೆ.ಎಂ. ಭವಾನಿ ತಿಳಿಸಿದರು.
ಸನ್ಮಾನ - ಪುರಸ್ಕಾರ
ಸಮ್ಮೇಳನದಲ್ಲಿ ಉಪನ್ಯಾಸಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನಿವೃತ್ತರಿಗೆ ಸನ್ಮಾನ ಮಾಡಲಿದ್ದಾರೆ ಹಾಗೂ ಶೇ. 100 ರಷ್ಟು ಫಲಿತಾಂಶ ಪಡೆಯಲು ಕಾರಣಕರ್ತರಾದ ಉಪನ್ಯಾಸಕರಿಗೆ ಹಾಗೂ ಪ್ರಾಂಶುಪಾಲರಿಗೆ ಪುರಸ್ಕಾರ ನೀಡಲಾಗುವದೆಂದರು.
ವಿಷಯ ಮಂಡನೆ
ವಿಶ್ರಾಂತ ಪ್ರಾಧ್ಯಾಪಕರು ಮತ್ತು ಜಾನಪದ ತಜ್ಞರಾದ ಡಾ. ಪಿ.ಕೆ. ರಾಜಶೇಖರ್ ಅವರು ಏಕರೂಪ ಶಿಕ್ಷಣ ವ್ಯವಸ್ಥೆ ಹಾಗೂ ಕುಶಾಲನಗರದ ಕೆ.ಜೆ. ತಿಲಕ್ ಕುಮಾರ್ ಅವರು ಖಜಾನೆ-2 ಕುರಿತು ಸಮ್ಮೇಳನದಲ್ಲಿ ವಿಷಯ ಮಂಡನೆ ಮಾಡಲಿದ್ದಾರೆ ಎಂದು ಕೆ.ಎಂ. ಭವಾನಿ ತಿಳಿಸಿದರು.
ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಸಿ.ಎಂ. ಮಹಾಲಿಂಗಯ್ಯ ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪಾನ್ಯಾಸಕರ ಸಂಘದ ಅಧ್ಯಕ್ಷ ಸಿ.ಎನ್. ವಿಶ್ವನಾಥ್ ಉಪಸ್ಥಿತರಿದ್ದರು.