ಸುಂಟಿಕೊಪ್ಪ, ಡಿ. 8: ನಮ್ಮ ಸುಂಟಿಕೊಪ್ಪ ಬಳಗದ ವಾರ್ಷಿಕೋತ್ಸವ ಕಾರ್ಯಕ್ರಮ 2018ರ ಜ. 14 ರಂದು ನಡೆಯಲಿದ್ದು, ವಿಭಿನ್ನ ಕಾರ್ಯಕ್ರಮ ಆಯೋಜಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತಾ ಸಭೆ ಬಳಗದ ಝಾಯ್ದ್ ಅಹ್ಮದ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ನಡೆಯಿತು.

ಸುಂಟಿಕೊಪ್ಪದಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಕಾರ್ಯಕ್ರಮದ ಯಶಸ್ವಿಗೆ ಸ್ವಾಗತ ಸಮಿತಿ, ಹಣಕಾಸು ಸಮಿತಿ, ಸಾಂಸ್ಕøತಿಕ ಸಮಿತಿ, ಕ್ರೀಡಾ ಸಮಿತಿ, ವೇದಿಕೆ ಸಮಿತಿ, ತಾಂತ್ರಿಕ ಸಮಿತಿ, ಆಹಾರ ಸಮಿತಿ ಹಾಗೂ ಪ್ರಚಾರ ಸಮಿತಿಯನ್ನು ರಚಿಸಲಾಯಿತು.

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರೀಡಾ ಸಮಿತಿಯಿಂದ ತಾ. 31 ರಂದು ಮಹಿಳೆಯರಿಗೆ ಹಾಗೂ ಜ. 7 ರಂದು ಪುರುಷರಿಗೆ ವಿವಿಧ ಮನರಂಜನಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಸಾಂಸ್ಕøತಿಕ ಕಾರ್ಯಕ್ರಮದ ಬಗ್ಗೆ ಅನಿಲ್ ಕುಮಾರ್ 9845028918, ಕ್ರೀಡಾಕೂಟದ ಬಗ್ಗೆ ಸಮೀರ್ 9113894725 ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.