ಮಡಿಕೇರಿ, ಡಿ. 8: ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಪ್ರತಿಯೊಬ್ಬರೂ ವಿಶೇಷ ಒತ್ತು ನೀಡ ಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಸಲಹೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಕರ ಹಾಗೂ ಬಾಲಕಿಯರ ಬಾಲ ಮಂದಿರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವಂತೆ, ಮಕ್ಕಳ ಪಾಲನೆ ಮತ್ತು ಪೋಷಣೆ ಬಗ್ಗೆ ಹೆಚ್ಚಿನ ನಿಗಾವಹಿಸಿದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸೂರಜ್, ನಬಾರ್ಡ್ ಮುಂಡಂಡ ಸಿ. ನಾಣಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಮಮ್ತಾಜ್ ಇತರರು ಇದ್ದರು.