ಮಡಿಕೇರಿ, ಡಿ.7 : ಮಡಿಕೇರಿ ತಾಲೂಕಿನ ಮೇಕೇರಿ ಗ್ರಾ.ಪಂ. ಮತ್ತು ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ತಾ. 8 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಮೇಕೇರಿ ಗ್ರಾಮದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನೀಫ್ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್ 2016-17ನೇ ಸಾಲಿನಲ್ಲಿ ರೂ. 68 ಲಕ್ಷ ಬಿಡುಗಡೆಯಾಗಿದ್ದು, ಈ ಸಂಬಂಧ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ ಸೇರಿದಂತೆ ಜಿಲ್ಲಾ ಕಾಂಗ್ರೆಸ್‍ನ ಪ್ರಮುಖರು, ಬ್ಲಾಕ್ ಕಾಂಗ್ರೆಸ್‍ನ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ಹನೀಫ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.