ಕುಶಾಲನಗರ, ಡಿ. 7: ಕುಶಾಲನಗರ ಸಮೀಪ ಮುಳ್ಳುಸೋಗೆ ಗ್ರಾಮದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ.
ಗುಮ್ಮನಕೊಲ್ಲಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಪ್ರವೀಣ್, ನವೀನ ನಾಯ್ಕ, ರಘು ಮತ್ತು ಎಸ್.ಮಂಜು ಮತ್ತು ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸೇರಿದ ಎರಡು ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು, 2 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.