ಮಡಿಕೇರಿ, ಡಿ.8 : ಶಾಲಾ-ಕಾಲೇಜುಗಳು ದೇಗುಲವಿದ್ದಂತೆ. ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಸುಂದರ ಕಟ್ಟಡ ನಿರ್ಮಾಣದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣವನ್ನು ನಿರ್ಮಿಸಿಕೊಡಲು ಸಹಕಾರಿಯಾಗಿದೆ ಎಂದು ಶಾಸಕರು ಹಾಗೂ ಸ.ಪ.ಪೂ.ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ವತಿಯಿಂದ ಮಂಜೂರಾಗಿರುವ ಕೊಠಡಿಗಳ ಭೂಮಿ ಪೂಜಾ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಿತು.

ಪೂಜೆ ನೆರವೇರಿಸಿ ಮಾತನಾಡಿದ ಅವರು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ 2 ಬೋಧನ ಕೊಠಡಿ ಹಾಗೂ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುವದು.

ಕಾಲೇಜು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ತುರ್ತಾಗಿ ಪೂರ್ಣಗೊಳಿಸ ಲಾಗುವದು ಹಾಗೂ ಕಾಲೇಜು ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವದು ಎಂದು ತಿಳಿಸಿದರು. ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಬೆಳ್ಯಪ್ಪ, ಸ.ಪ.ಪೂ. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಧನಂಜಯ ಇತರರು ಇದ್ದರು.