ನಾಪೆÉÇೀಕ್ಲು, ಡಿ. 9: ಭಾರತೀಯ ಜನತಾ ಪಕ್ಷ ಮತ್ತು ಜಿಲ್ಲಾ ವೈದ್ಯಕೀಯ ಪ್ರಕೋಷ್ಠ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮತ್ತು ನಾಪೆÉÇೀಕ್ಲು ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಪಿಂಚಣಿ ಕಾರ್ಡ್ ವಿತರಣಾ ಕಾರ್ಯಕ್ರಮ ತಾ. 11 ರಂದು ನಾಪೆÇೀಕ್ಲು ಭಗವತಿ ದೇವಾಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನಾಪೆÇೀಕ್ಲು ವಲಯ ಬಿಜೆಪಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಪಕ್ಷಾತೀತ, ಜಾತ್ಯತೀತ ಕಾರ್ಯಕ್ರಮವಾಗಿದ್ದು, ಎಲ್ಲಾ ವಿಕಲಚೇತನರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು ಎಂದರು. ಕಾರ್ಯಕ್ರಮದಲ್ಲಿ ವಿಕಲಚೇತನರನ್ನು ಜಿಲ್ಲಾ ಬಿಜೆಪಿಯ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ಬಿ.ಸಿ. ನವೀನ್ ಕುಮಾರ್ ನೇತೃತ್ವದ ಐದು ಜನ ಸರಕಾರಿ ವೈದ್ಯರ ತಂಡ ತಪಾಸಣೆ ನಡೆಸಿ ಅಂಗವೈಕಲ್ಯದ ಬಗ್ಗೆ ಪ್ರಮಾಣ ಪತ್ರ ನೀಡಲಿರುವರು. ಈ ಹಿಂದೆ ಪ್ರಮಾಣ ಪತ್ರ ಪಡೆದಿರುವ ವಿಕಲಚೇತನರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಪಾಸಣೆ ಮಾಡಿಕೊಳ್ಳಬಹುದಾಗಿದೆ. ಪಲಾನುಭವಿಗಳು ಇದರ ಸದೂಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿರುವರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಸೇರಿದಂತೆ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯ ಶಿವಚಾಳಿಯಂಡ ಜಗದೀಶ್, ಸಹಕಾರ ಪ್ರಕೋಷ್ಠದ ಸಹ ಸಂಚಾಲಕ ಪಾಡಿಯಮ್ಮಂಡ ಮನು ಮಹೇಶ್, ವಲಯ ಬಿಜೆಪಿ ಕಾರ್ಯದರ್ಶಿ ಕನ್ನಂಬಿರ ಸುಧಿ ತಿಮ್ಮಯ್ಯ ಇದ್ದರು.