ಸಿದ್ದಾಪುರ, ಡಿ. 10: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ-ಬಾಣಂಗಾಲ ಮಟ್ಟ ಗ್ರಾಮದ ರಸ್ತೆ ಕಾಮಗಾರಿಗೆ ರಾಜ್ಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಭೂಮಿ ಪೂಜೆ ನೆರೆವೇರಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಅನುದಾನದಲ್ಲಿ ರೂ. 2 ಲಕ್ಷ ವೆಚ್ಚದ ರಸ್ತೆ ಡಾಮರೀಕರಣಕ್ಕೆ ಚಾಲನೆ ನೀಡಿದ ಬಳಿಕ ಪಿ.ಸಿ. ಹಸೈನಾರ್ ಮಾತನಾಡಿ, ರಾಜ್ಯ ಸರ್ಕಾರವು ಜಿಲ್ಲೆಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯ ಹೆಚ್.ಸಿ. ಸಣ್ಣಯ್ಯ, ಬ್ಲಾಕ್ ಕಾರ್ಯದರ್ಶಿ ಯೋಗೇಶ್, ವಕ್ಫ್ ಬೋರ್ಡ್ ಸದಸ್ಯ ಬಾವ, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಮಹಮ್ಮದ್ ಆಲಿ, ಆಶ್ರಫ್, ನೌಫಲ್ ಹಾಗೂ ಮಟ್ಟ ಮಸೀದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.