*ಸಿದ್ದಾಪುರ, ಡಿ. 11: ಕ್ರೀಡೆಯ ತವರೂರು ಕೊಡಗಿನಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಪ್ರೋತ್ಸಾಹ ನೀಡುವಂತಾಗಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಂಜರಾಯಪಟ್ಟಣದ ನಂಜುಂಡೇಶ್ವರ ಯುವಕ ಸಂಘದ ಆಶ್ರಯದಲ್ಲಿ ಆಯೋಜಿತ 3ನೇ ವರ್ಷದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಂಜರಾಯಪಟ್ಟಣದ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮಾನಂದ ಮಾತನಾಡಿ, ಗ್ರಾಮದಲ್ಲಿ ಸಾಕಷ್ಟು ಕ್ರೀಡೆಗಳನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು, ಈ ಮೂಲಕ ಗ್ರಾಮದ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಈ ಸಂದರ್ಭ ನಂಜುಂಡೇಶ್ವರ ಯುವಕ ಸಂಘದ ಅಧ್ಯಕ್ಷ ವಿಶ್ವ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮಹೇಶ್, ಪತ್ರಕರ್ತ ಅಂಚೆಮನೆ ಸುಧಿ, ಚಂದ್ರಶೇಖರ್, ಸ್ಥಳೀಯರಾದ ಜನಾರ್ಧನ್, ದೇವೆಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆÉಗಳ ಸುಮಾರು 20ಕ್ಕೂ ಅಧಿಕ ತಂಡಗಳು ಪಾಲ್ಗೊಂಡು ಪ್ರಶಸ್ತಿಗಾಗಿ ಹಣಾಹಣಿ ನಡೆಸಿದವು.