ಮಡಿಕೇರಿ, ಡಿ.11: ಅಶ್ವಿನಿ ಆಸ್ಪತ್ರೆ ಮತ್ತು ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್ಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇವರ ಸಂಯುಕ್ತಾಶ್ರಯದಲ್ಲಿ ತಾ. 14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ನವೀಕರಿಸಿದ ಮತ್ತು ಉನ್ನತೀಕರಿಸಿದ ದಂತ ಚಿಕಿತ್ಸಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಎನ್.ವಿನಯ್ ಹೆಗ್ಡೆ, ಉಪ ಕುಲಪತಿ ವಿಶಾಲ್ ಹೆಗ್ಡೆ, ಶ್ರೀ ಕಾವೇರಿ ಕೃಪಾ ವಿಶ್ವ ಕಲ್ಯಾಣ ಸೇವಾ ಸಮಿತಿಯ ಟ್ರಸ್ಟಿ ಕೆ.ಎಸ್.ದೇವಯ್ಯ, ಸಮಿತಿಯ ಅಧ್ಯಕ್ಷ ಬಿ.ಕೆ. ಕೃಷ್ಣ ಇತರರು ಪಾಲ್ಗೊಳ್ಳಲಿದ್ದಾರೆ.