ಸೋಮವಾರಪೇಟೆ, ಡಿ.12: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ 31ನೇ ವರ್ಷದ ಬೆಳ್ಳಿಬಟ್ಟಲಿನ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ತಾ. 15 ಮತ್ತು 16ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ತಿಳಿಸಿದ್ದಾರೆ.

ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ಸಲುವಾಗಿ ಪಂದ್ಯಾಟ ಆಯೋಜಿಸಿದ್ದು, ಪಟ್ಟಣದ ಬಸವೇಶ್ವರ ರಸ್ತೆಯ ಸಾಕಮ್ಮನ ಬಂಗ್ಲೆ ಎದುರಿನಲ್ಲಿದ್ದ ಜಾಗವನ್ನು ಪಂದ್ಯಾಟಕ್ಕೆ ಸಜ್ಜುಗೊಳಿಸಲಾಗುತ್ತಿದೆ.

ಈ ಬಾರಿ 5ರಿಂದ 7ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ನಾಗರಾಜ್ ತಿಳಿಸಿದ್ದಾರೆ.

ತಾ. 15ರಂದು ಪೂರ್ವಾಹ್ನ 11 ಗಂಟೆಗೆ ಕಾಫಿ ಬೆಳೆಗಾರ ಆನಂದ್ ಬಸಪ್ಪ ಅವರು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಲಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಡಿ.ಎಸ್. ನಿರ್ವಾಣಪ್ಪ ಹಾಗೂ ರಾಜ್ಯ ಪತ್ರಕರ್ತರ ಸಂಘದ ನಿರ್ದೇಶಕ ಎಸ್.ಎ. ಮುರಳೀಧರ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ಸದಸ್ಯರುಗಳಾದ ಆದಂ, ಬಿ.ಎಂ. ಈಶ್ವರ್, ಮೀನಾಕುಮಾರಿ, ಬಿ.ಜಿ. ಇಂದ್ರೇಶ್, ಮಾಜಿ ಅಧ್ಯಕ್ಷೆ ನಳಿನಿ ಗಣೇಶ್, ಹಿರಿಯ ಕಾಂಗ್ರೆಸ್ ಮುಖಂಡ ಜೋಸೆಫ್ ಡಿಸಿಲ್ವಾ, ಆರಕ್ಷಕ ಉಪನಿರೀಕ್ಷಕ ಶಿವಣ್ಣ ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ತಾ. 16ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಸಂಜೆ 5.30ಕ್ಕೆ ಉದ್ಯಮಿ ಹರಪಳ್ಳಿ ರವೀಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜ್, ಕಾಂಗ್ರೆಸ್ ಮುಖಂಡ ಚಂದ್ರಮೌಳಿ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ. ಶಶಿಧರ್, ಮಾಜಿ ಪ್ರಧಾನ ಕಾರ್ಯದರ್ಶಿ ಪೂಣಚ್ಚ, ಕಾಫಿ ಬೆಳೆಗಾರ ವಿನೋದ್ ಶಿವಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವು ಮಾದಪ್ಪ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಮಾರಂಭದಲ್ಲಿ ಬೇಳೂರು ಗ್ರಾಪಂ ಸದಸ್ಯ ಯೋಗೇಂದ್ರ ಹಾಗೂ ಪೌರಕಾರ್ಮಿಕ ನರಸಿಂಹ ಅವರನ್ನು ಸನ್ಮಾನಿಸಲಾಗುವದು ಎಂದು ನಾಗರಾಜ್ ಮಾಹಿತಿ ನೀಡಿದ್ದಾರೆ.