ಮಡಿಕೇರಿ, ಡಿ. 12: ಇಲ್ಲಿ ನೂತನವಾಗಿ ತಲೆ ಎತ್ತಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮೆಡಿಕಲ್ ಕಾಲೇಜು)ಯಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಇಂದು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಪ್ರಸಂಗ ಎದುರಾಯಿತು. ಕಳೆದ ಎರಡು ದಿನಗಳಿಂದ ಇಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಕೂಡಲೇ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.