ಮಡಿಕೇರಿ, ಡಿ. 13: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘÀದ ಜಿಲ್ಲಾ ಘಟಕದ ವತಿಯಿಂದ ಶೈಕ್ಷಣಿಕ ಸಮ್ಮೇಳನ ಮತ್ತು ವಿಚಾರಗೋಷ್ಠಿ ತಾ. 20 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಎಸ್. ಜನಾರ್ಧನ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಸಮ್ಮೇಳನದಲ್ಲಿ ಶಿಕ್ಷಕರ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವದು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವದು, ಕೆಲಸದ ಒತ್ತಡದಿಂದ ಶಿಕ್ಷಕರಿಗೆ ಕಾರ್ಯ ನಿರ್ವಹಿಸಲು ಸಾಧ್ಯವಾಗದೆ ಇರುವದು, ವೇತನ ತಾರತಮ್ಯ ಸೇರಿದಂತೆ ಶಿಕ್ಷಕರ ಸಮಸ್ಯೆಗಳು ಹಾಗೂ 6ನೇ ವೇತನ ಆಯೋಗದ ವರದಿಯನ್ನು ಪ್ರಸ್ತಾಪಿಸಲಾ ಗುವದೆಂದರು.

ತಾ. 20 ರಂದು ಕುಶಾಲನಗರದ ಜಿಎಂಪಿ ಶಾಲಾ ಆವರಣದಿಂದ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಲಿದ್ದು, ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಪಶು ಸಂಗೋಪನಾ ಸಚಿವರಾದ ಎ. ಮಂಜು ಸಾಧಕರನ್ನು ಸನ್ಮಾನಿಸಲಿದ್ದಾರೆ. ಕಲಿಕೋಪಕರಣ ಪ್ರದರ್ಶನವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಮಾಜಿ ಶಾಸಕ ಬಿ.ಎ. ಜೀವಿಜಯ, ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಸೇರಿದಂತೆ ಎಸ್‍ಡಿಎಂಸಿ ಅಧ್ಯಕ್ಷರುಗಳು, ಶಿಕ್ಷಕರ ಸಂಘದ ಪ್ರತಿನಿಧಿಗಳು, ಅಧಿಕಾರಿಗಳು, ಅಕ್ಷರ ದಾಸೋಹದ ಸಿಬ್ಬಂದಿಗಳು ಪಾಲ್ಗೊಳ್ಳುವರು ಎಂದು ಜನಾರ್ಧನ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಾಜಿ ಸದಸ್ಯರಾದ ಅರುಣ್ ಮಾಚಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಶಿಕ್ಷಕರ ಸಂಘÀದ ಜಿಲ್ಲಾಧ್ಯಕ್ಷ ಹೆಚ್.ಎಸ್. ಚೇತನ್ ನೇತೃತ್ವದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸ್ಪರ್ಧೆಗಳು

ಸಂಘದ ಉಪಾಧ್ಯಕ್ಷೆ ಡಿ.ಕೆ. ರೇಖಾ ಕುಮಾರಿ ಮಾತನಾಡಿ, ಸಮ್ಮೇಳನಕ್ಕೆ ಪÀÇರ್ವಭಾವಿಯಾಗಿ ತಾ. 16 ರಂದು ಮಡಿಕೇರಿಯ ಜಿಎಂಪಿ ಶಾಲಾ ಮೈದಾನದಲ್ಲಿ ಮೂರು ತಾಲೂಕಿನ ಶಿಕ್ಷಕರಿಗಾಗಿ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.