ಮಡಿಕೇರಿ, ಡಿ.13 : ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 15 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲೂಕು ಬ್ಯಾಡಗೊಟ್ಟದಲ್ಲಿ ಬ್ಯಾಡಗೊಟ್ಟ-ಮಲ್ಲಿಪಟ್ಟಣ ರಸ್ತೆಯ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಲಿದ್ದಾರೆ. 11.30 ಗಂಟೆಗೆ ಸೋಮವಾರಪೇಟೆ ತಹಶೀಲ್ದಾರರ ಕಚೇರಿಯಲ್ಲಿ ಸೋಮವಾರಪೇಟೆ ಸಂಬಂಧಿಸಿದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟಿಸಲಿದ್ದಾರೆ. 3.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆಯ ಜಿಲ್ಲಾ ಮಟ್ಟದ ಆಯ್ಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ ಸಭೆ ನಡೆಸಲಿದ್ದಾರೆ. 4.30 ಗಂಟೆಗೆ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನೆಗೆ ಆಗಮಿಸುತ್ತ್ತಿರುವ ಸ್ಥಳದ ಪೂರ್ವಭಾವಿ ವೀಕ್ಷಣೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಆ್ಯಂಟನಿ ಮೆಂಡೋನ್ಸಾ ತಿಳಿಸಿದ್ದಾರೆ.

*ಮಡಿಕೇರಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಾ. 15 ರಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳೊಂದಿಗೆ ಕಂದಾಯ ಕಾನೂನು 94-ಎ, 94-ಬಿ, 94-ಸಿ ಮತ್ತು 94ಸಿಸಿ ಅರ್ಜಿಗಳ ವಿಲೇವಾರಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಿ ದ್ದಾರೆ ಎಂದು ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

* ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಅವರು ತಾ.15 ರಂದು ಭೇಟಿ ನೀಡಲಿದ್ದಾರೆ. 11.30 ಗಂಟೆಗೆ ವೀರಾಜಪೇಟೆ ಟೌನ್ ಹಾಲ್‍ನಲ್ಲಿ ವಿದ್ಯುತ್ ರಹಿತ ಬಡ ಕುಟುಂಬಗಳಿಗೆ ‘ಬೆಳಕಿನ ಭಾಗ್ಯ’ ಕಾರ್ಯಕ್ರಮದಡಿ ಯಲ್ಲಿ ಸೋಲಾರ್ ರೂಫ್ ಲ್ಯಾಂಪ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.