ಮಡಿಕೇರಿ, ಡಿ. 13: ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಂಯೋಜಕರಿಂದ ಮಾಹಿತಿ ಪಡೆದು ಮಕ್ಕಳ ರಕ್ಷಣೆ ಬಗ್ಗೆ ಎನ್.ಜಿ.ಓ. ಗಳು ಸೂಕ್ತ ಕ್ರಮವಹಿಸಬೇಕು ಹಾಗೂ ಕಾರ್ಮಿಕ ಇಲಾಖೆ ಸರಿಯಾದ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳನ್ನು ಬಿಕ್ಷಾಟನೆಗೆ ಕಳುಹಿಸಿದರೆ ಅಂತಹ ತಂದೆ/ ತಾಯಿ ಮೇಲೆ ಪ್ರಕರಣ ದಾಖಲಿಸಿ ಬಂಧಿಸುವ ಕಾಯ್ದೆಯಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಕ್ಕಳ ಸಹಾಯವಾಣಿ ಸಲಹಾ ಸಮಿತಿಯ ಸಂಯೋಜಕ ನವೀನ್ ‘ಮಕ್ಕಳ ರಕ್ಷಣೆ ಮತ್ತು ಪೋಷಣೆ’ ಬಗ್ಗೆ ಹಲವು ಸಲಹೆ ನೀಡಿದರು.

ಮಕ್ಕಳ ಸಮಿತಿಯಿಂದ ತಂದೆ, ತಾಯಿ ಇಲ್ಲದ ಮಕ್ಕಳನ್ನು ರಕ್ಷಣೆ ಮಾಡಿದ್ದೇವೆ. ಮಕ್ಕಳ ಸಹಾಯವಾಣಿಗೆ 104 ಕರೆಗಳು ಬಂದಿವೆ ಎಂದರು.

ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಬೇಕು. ಹಾಗೆಯೇ ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಿ ಎಂದು ಮಕ್ಕಳ ಸಹಾಯವಾಣಿ ಸಲಹಾ ಸಮಿತಿಯ ಸಂಯೋಜಕ ನವೀನ್ ಕೋರಿದರು.