ಮಡಿಕೇರಿ, ಡಿ. 16: ಕೋಮು ದ್ವೇಷವನ್ನು ಸೃಷ್ಟಿಸುತ್ತಿರುವ ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿರುವ ರಾಜ್ಯದ ಯುವ ಸಮೂಹ ಪ್ರಾದೇಶಿಕ ಪಕ್ಷವಾಗಿರುವ ಜಾತ್ಯತೀತ ಜನತಾದಳದೆಡೆಗೆ ಆಕರ್ಷಿತ ರಾಗುತ್ತಿದ್ದು, ಯುವಕರ ನಡಿಗೆ ಕುಮಾರಣ್ಣನ ಕಡೆಗೆ ಅಭಿಯಾನವನ್ನು ಕೊಡಗು ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವದಾಗಿ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ವಿಧಾನಸಭಾ ಕ್ಷೇತ್ರದ 47 ಗ್ರಾ.ಪಂ. ಹಾಗೂ ವೀರಾಜಪೇಟೆ ಕ್ಷೇತ್ರದ 49 ಗ್ರಾ.ಪಂ. ವ್ಯಾಪ್ತಿಯ ಜೆಡಿಎಸ್ ಯುವ ಘಟಕಗಳನ್ನು ಪುನರ್ ರಚಿಸಲಾಗುತ್ತಿದ್ದು, ಈ ಸಮಿತಿಗಳು ಗ್ರಾಮ ಭೇಟಿಯ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ 20 ತಿಂಗಳ ಮಡಿಕೇರಿ, ಡಿ. 16: ಕೋಮು ದ್ವೇಷವನ್ನು ಸೃಷ್ಟಿಸುತ್ತಿರುವ ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿರುವ ರಾಜ್ಯದ ಯುವ ಸಮೂಹ ಪ್ರಾದೇಶಿಕ ಪಕ್ಷವಾಗಿರುವ ಜಾತ್ಯತೀತ ಜನತಾದಳದೆಡೆಗೆ ಆಕರ್ಷಿತ ರಾಗುತ್ತಿದ್ದು, ಯುವಕರ ನಡಿಗೆ ಕುಮಾರಣ್ಣನ ಕಡೆಗೆ ಅಭಿಯಾನವನ್ನು ಕೊಡಗು ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವದಾಗಿ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ವಿಧಾನಸಭಾ ಕ್ಷೇತ್ರದ 47 ಗ್ರಾ.ಪಂ. ಹಾಗೂ ವೀರಾಜಪೇಟೆ ಕ್ಷೇತ್ರದ 49 ಗ್ರಾ.ಪಂ. ವ್ಯಾಪ್ತಿಯ ಜೆಡಿಎಸ್ ಯುವ ಘಟಕಗಳನ್ನು ಪುನರ್ ರಚಿಸಲಾಗುತ್ತಿದ್ದು, ಈ ಸಮಿತಿಗಳು ಗ್ರಾಮ ಭೇಟಿಯ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ 20 ತಿಂಗಳ ನಾಗೇಶ್, ಎಂ.ಎಸ್. ಇಬ್ರಾಹಿಂ ಹಾಗೂ ವಕ್ತಾರರಾಗಿ ಬಿ.ಕೆ. ಧನಂಜಯ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ವಿಶ್ವ ತಿಳಿಸಿದರು.

ಯುವ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಬಿ.ವೈ. ರಾಜೇಶ್ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ಜನರು ಬೇಸತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್‍ನ ಅನಿವಾರ್ಯತೆ ರಾಜ್ಯಕ್ಕೆ ಬಂದೊದಗಿದೆ ಎಂದು ಅಭಿಪ್ರಾಯ ಪಟ್ಟರು.

ಯುವ ಕಾರ್ಯಕರ್ತರು ಪರಿಣಾಮಕಾರಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ರಾಜ್ಯ ಮಟ್ಟದ ಯುವ ಜೆಡಿಎಸ್ ಸಮಾವೇಶ ಸಧ್ಯದಲ್ಲಿಯೇ ನಡೆಯಲಿದೆ ಎಂದರು. ಕೊಡಗು ಜಿಲ್ಲೆಯಾದ್ಯಂತ ಬೂತ್ ಮಟ್ಟದ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ಯುವಕರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ರಾಜೇಶ್ ತಿಳಿಸಿದರು.

ಗೋಷ್ಠಿಯಲ್ಲಿ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಜಿ. ಜಾಶಿರ್ ಹಾಗೂ ಉಪಾಧ್ಯಕ್ಷ ಹೆಚ್.ಕೆ. ಪ್ರೆಸ್ಸಿ ಉಪಸ್ಥಿತರಿದ್ದರು.