ಕುಶಾಲನಗರ, ಡಿ. 20: ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ತಾ. 24 ರಂದು ಸಂತೋಷಕೂಟ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನ್ ತಿಳಿಸಿದರು.ಸಮಾಜದ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯ ಬಾಂಧವರ ನಡುವೆ ಬಾಂಧವ್ಯ ವೃದ್ಧಿ ಹಾಗೂ ಸಂಸ್ಕøತಿಯ ಅನಾವರಣ ಮತ್ತು ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಸಂತೋಷಕೂಟ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

ಸಂತೋಷಕೂಟದ ಅಂಗವಾಗಿ ಸಮುದಾಯ ಬಾಂಧವರಿಗೆ ವಿವಿಧ ರೀತಿಯ ಕ್ರೀಡಾಕೂಟಗಳು ಪ್ರಾರಂಭಗೊಂಡಿವೆ. ತಾ. 23 ರಂದು ಸಾಂಸ್ಕøತಿಕ ಕಾರ್ಯಕ್ರಮ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಲಿದೆ. ವಿಜೇತರಾದವರಿಗೆ ಸಂತೋಷಕೂಟದ ದಿನ ಬಹುಮಾನ ವಿತರಣೆ ಮಾಡಲಾಗುವದು ಎಂದರು.

ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕುಶಾಲನಗರ ಡಿವೈಎಸ್ಪಿ ಪೆರುಬಾಯಿ ಮುರಳೀಧರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇತಿಹಾಸಕಾರ ತಲಕಾಡು ಚಿಕ್ಕರಂಗೇಗೌಡ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಪಾಲ್ಗೊಳ್ಳಲಿ ದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಮಾಜದ ಕಾರ್ಯದರ್ಶಿಗಳಾದ ಹಾಲುಗುಂಜ ಕೃಷ್ಣಮೂರ್ತಿ, ಬೈಮನ ಪೊನ್ನಪ್ಪ, ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ ಪೊನ್ನಚ್ಚನ ಮೋಹನ್, ಪದ್ಮಾವತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪಟ್ಟಂದಿ ಬೀನಾ ಸೀತಾರಾಂ, ಸ್ವಸಹಾಯ ಸಂಘದ ಅಧ್ಯಕ್ಷೆ ಕೇಚಪ್ಪನ ಪ್ರಮೀಳ ಮೋಹನ್, ಗೌಡ ಯುವಕ ಸಂಘದ ಕಾರ್ಯದರ್ಶಿ ನಡುವಟ್ಟಿರ ಶಿವಪ್ರಕಾಶ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಸುಳ್ಯಕೋಡಿ ಮಾದಪ್ಪ, ಪ್ರಮುಖರಾದ ಕುಲ್ಲಚೆಟ್ಟಿ ಕಾಶಿ ಪೂವಯ್ಯ, ಚೆರಿಯಮನೆ ಹರೀಶ್, ಕೂರನ ಪ್ರಕಾಶ್, ಮುದ್ಯನ ವಿಜಯಕುಮಾರ್, ಚೀಯಂಡಿ ಶಾಂತಿ, ಕುಯ್ಯಮುಡಿ ವಾಣಿ ಮತ್ತಿತರರು ಇದ್ದರು.