ಮಡಿಕೇರಿ, ಡಿ. 20: ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ತಾ. 22 ರಿಂದ 28 ರವರೆಗೆ ಮಕ್ಕಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ-2017-18 ನಡೆಯಲಿದೆ.
ತಾ. 22 ರಂದು ಮಧ್ಯಾಹ್ನ 1.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಸ.ಪ್ರ.ದ. ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಜೆನಿಫರ್ ಲೋಲಿಟ ಸಿ., ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಇತರರು ಪಾಲ್ಗೊಳ್ಳಲಿದ್ದಾರೆ.