ಸುಂಟಿಕೊಪ್ಪ, ಡಿ. 20: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ 2016-17ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ತಾ. 21 ರಂದು (ಇಂದು) ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ ಮತ್ತು ನೋಡೆಲ್ ಅಧಿಕಾರಿಗಳಾಗಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಡಿ.ಬಿ. ಸುನಿಲ್ ಆಗಮಿಸುವರು.