ಮಡಿಕೇರಿ, ಡಿ.19 : ನಗರ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆಯನ್ನು ಕಡ್ಡಾಯವಾಗಿ ಸಂಗ್ರಹ ಮಾಡುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಡಿಕೇರಿ, ಡಿ.19 : ನಗರ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆಯನ್ನು ಕಡ್ಡಾಯವಾಗಿ ಸಂಗ್ರಹ ಮಾಡುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ತಿ ತೆರಿಗೆ, ಉದ್ಯಮ ಪರವಾನಗಿ, ಜಾಹೀರಾತು ತೆರಿಗೆ, ಬಾಡಿಗೆ ಸಂಗ್ರಹ ಹೀಗೆ ನಾನಾ ರೀತಿಯ ತೆರಿಗೆಗಳನ್ನು ಕಾಲ ಮಿತಿಯೊಳಗೆ ಸಂಗ್ರಹ ಮಾಡಬೇಕು.

ನಗರ ಸ್ಥಳೀಯ ಸಂಸ್ಥೆಯ ಯೋಜನಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ನಗರೋತ್ಥಾನ 1, 2 ಮತ್ತು 3 ಕಾರ್ಯಕ್ರಮಗಳ ಪ್ರಗತಿ ಸಾಧಿಸಬೇಕು. 13, 14ನೇ ಹಣಕಾಸು ಯೋಜನೆಯ ಪ್ರಗತಿ, ಎಸ್.ಎಫ್.ಸಿ. ಯೋಜನೆ ಮತ್ತಿತರ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಡಿಕೇರಿ ನಗರಸಭೆ, ಮೂರು ಪಟ್ಟಣ ಪಂಚಾಯಿತಿಗಳಲ್ಲಿ ವೈಯಕ್ತಿಕ ಶೌಚಾಲಯ ಹಾಗೂ ಸಮುದಾಯ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರು ಪೂರೈಕೆ, ಕೌಶಲ್ಯ ತರಬೇತಿ ಮತ್ತಿತರ ಕಡೆ ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ನಗರಾಭಿವೃದ್ಧಿ ಯೋಜನಾ ಕೋಶದ ಗೋಪಾಲಕೃಷ್ಣ, ಪೌರಾಯುಕ್ತೆ ಬಿ.ಶುಭ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್ (ವೀರಾಜಪೇಟೆ), ಶ್ರೀಧರ್ (ಕುಶಾಲನಗರ), ನಾಚಪ್ಪ (ಸೋಮವಾರಪೇಟೆ) ಇತರರು ತಮ್ಮ ಸ್ಥಳೀಯ ಸಂಸ್ಥೆಗಳ ಹಲವು ಮಾಹಿತಿ ನೀಡಿದರು.