ಸೋಮವಾರಪೇಟೆ, ಡಿ. 19: ಇಲ್ಲಿನ ಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ತಾ. 24 ರಂದು ನಾರಾಯಣಗುರು ಜಯಂತಿ ಹಾಗೂ 18ನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಡಿ. ಕೃಷ್ಣಪ್ಪ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 9.30 ಗಂಟೆಗೆ ಸಂಘದ ನಿವೇಶನದಲ್ಲಿ ಶ್ರೀ ನಾರಾಯಣಗುರುಗಳ ಜಯಂತಿಯನ್ನು ಆಚರಿಸಲಾಗುವದು. 10.30ಕ್ಕೆ ಸ್ಥಳೀಯ ಮಾನಸ ಸಭಾಂಗಣದಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಮಹಾಸಭೆಯಲ್ಲಿ ಸಂಘದ ಸದಸ್ಯತ್ವ ಪಡೆದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈಗಾಗಲೇ ವಿದ್ಯಾನಿಧಿಯನ್ನು ಸ್ಥಾಪಿಸಿದ್ದು, ಸಮಿತಿಯ ಮಾಜಿ ಅಧ್ಯಕ್ಷ ಬಿ.ಆರ್. ಚಂದ್ರಹಾಸ್ ಮತ್ತು ಬೆಂಗಳೂರಿನ ಉದ್ಯಮಿ ಬಿ.ಆರ್. ಉದಯಕುಮಾರ್ ಅವರುಗಳು ವಿದ್ಯಾ ನಿಧಿಗೆ ಅನುದಾನ ನೀಡಿದ್ದಾರೆ ಎಂದು ಕೃಷ್ಣಪ್ಪ ತಿಳಿಸಿದ್ದಾರೆ.

2016-17ನೇ ಸಾಲಿನ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪ್ರಥಮ ಹಂತದಲ್ಲಿ ಅತೀ ಹೆಚ್ಚು ಅಂಕ ಗಳಿಸಿದವರಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಹರು ದೃಢೀಕರಿಸಿದ ಅಂಕಪಟ್ಟಿಯೊಂದಿಗೆ ಅರ್ಜಿ ಹಾಕಬಹುದಾಗಿದೆ. ಅರ್ಜಿ ಸಲ್ಲಿಸಲು ತಾ. 20 ಕೊನೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ 9731503131 ಅಥವಾ 9448504954 ರಲ್ಲಿ ಸಂಪರ್ಕಿಸಬಹುದೆಂದು ಸಮಿತಿ ಕಾರ್ಯದರ್ಶಿ ಬಿ.ಜಿ. ಇಂದಿರಾ ತಿಳಿಸಿದ್ದಾರೆ.