ಕೂಡಿಗೆ, ಡಿ. 19: ಕುಶಾಲನಗರ ಸಮೀಪದ ರಂಗಸಮುದ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಹಾಗೂ ರಂಗೋಲಿ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗೆ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಮಾತನಾಡಿ, ಮಕ್ಕಳಲ್ಲಿ ವ್ಯವಹಾರ ಪ್ರಜ್ಞೆ , ಸಾಮಾಜಿಕ ಬೆಳವಣಿಗೆ, ವ್ಯವಹಾರಗಳು ವಿಕಾಸಗೊಳ್ಳಲು ಮಕ್ಕಳ ಸಂತೆಯನ್ನು ಏರ್ಪಡಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ, ಸಮಿತಿಯ ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರು ಇದ್ದರು. ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ವಿವಿಧ ತರಕಾರಿಗಳು, ಹಣ್ಣುಗಳು, ಸೊಪ್ಪುಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡಿದರು. ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.