ಶನಿವಾರಸಂತೆ, ಡಿ. 19: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತರಾಂ ಅವರು ಕೊಡ್ಲಿಪೇಟೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಮೂದರವಳ್ಳಿ ಮತ್ತು ಬಾಗೇರಿ ಸಂಪರ್ಕ ರಸ್ತೆ ಕಲ್ಪಿಸುವ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ಹಂಡ್ಲಿ ವಲಯ ಅಧ್ಯಕ್ಷ ವೀರೇಂದ್ರ ಕುಮಾರ್, ಎಂ.ಎಲ್.ಸಿ. ವೀಣಾ ಅಚ್ಚಯ್ಯ, ಪ್ರಮುಖರಾದ ಹೆಚ್.ಎಸ್. ಚಂದ್ರಮೌಳಿ ಮತ್ತಿತರರು ಇದ್ದರು.