ಸೋಮವಾರಪೇಟೆ, ಡಿ. 19: ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡಕ್ಕೆ ಉಚಿತವಾಗಿ ಪೈಂಟ್ ಮಾಡಿಸಿಕೊಟ್ಟ ಪಟ್ಟಣದ ಉದ್ಯಮಿ ಬಿ.ಎಸ್. ಸದಾನಂದ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಸನ್ನ ಸೇರಿದಂತೆ ಪದಾಧಿಕಾರಿಗಳು ಸನ್ಮಾನಿಸಿದರು.