ಕೂಡಿಗೆ, ಡಿ. 21: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ ನಡೆಸಿದ್ದ ಜಿಲ್ಲಾಮಟ್ಟದ ಸಾಂಸ್ಕøತಿಕ ಹಾಗೂ ಸಹಪಠ್ಯ ಸ್ಪರ್ಧೆಗಳ ಭಾವಗೀತೆ ಸ್ಪರ್ಧೆಯಲ್ಲಿ ಕುಶಾಲನಗರದ ಸಂವೇದಿತ ಪ್ರಥಮ ಸ್ಥಾನ ಪಡೆದು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ಸಂಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮದ ಭಾವಗೀತೆ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕುಶಾಲನಗರದ ಸುಭಾಷ್ ಮತ್ತು ವೇದಾ ಸುಭಾಷ್ ದಂಪತಿಗಳ ಪುತ್ರಿಯಾಗಿರುವ ಸಂವೇದಿತಾ ಕುಶಾಲನಗರ ಫಾತಿಮಾ ಕಾನ್ವೆಂಟ್ ಕಾಂಪೋಸಿಟ್ ಪಿ.ಯು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.