ಕೂಡಿಗೆ, ಡಿ. 21: ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಎ.ಎಂ. ಆನಂದ್ ಅವರು ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯ ತೀರ್ಪುಗಾರರಾಗಿ ಆಯ್ಕೆಗೊಂಡು ಇದೀಗ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಆಲ್ ಇಂಡಿಯಾ ಕಬಡ್ಡಿ ತೀರ್ಪುಗಾರರಾಗಿ, ಭದ್ರಾವತಿ, ಉಡುಪಿ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‍ನ ತೀರ್ಪುಗಾರರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಇವರು ಸೋಮವಾರಪೇಟೆ ತಾಲೂಕಿನ ಯಡೂರು ಆಸೆಗೌಡನ ಮಾದಪ್ಪ ಹಾಗೂ ಪೊನ್ನಮ್ಮ ದಂಪತಿಯ ಪುತ್ರರಾಗಿದ್ದಾರೆ.