ಮಡಿಕೇರಿ, ಡಿ. 21: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 22 ರಂದು (ಇಂದು) ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಎಕಲಾಜಿಕಲ್ ಫಾರ್ಮಿಂಗ್ ಟೆಕ್ನಾಲಾಜಿಸ್, ಎಚ್.ಡಿ.ಎಫ್.ಸಿ. ಬ್ಯಾಂಕ್ ಲಿ., ಫ್ರೆಂಡ್‍ಲಿ ಮೋಟಾರ್ಸ್, ಟಾಟಾ ಸ್ಟ್ರೈವ್, ಕ್ಲಬ್ ಮಹೀಂದ್ರ, ಹಿಂದುಜಾ ಗ್ಲೋಬಲ್ ಸೊಲ್ಯೂಷನ್ಸ್ ಲಿ., ವುಡ್ ಲ್ಯಾಂಡ್ಸ್ ಹಾಗೂ ಕೊಜೆಂಟ್-ಇ-ಸರ್ವಿಸಸ್ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.