ಮಡಿಕೇರಿ, ಡಿ.21: ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಗೆದ್ದು ನಗರಸಭಾ ಸದಸ್ಯರಾಗಿ ಆಯ್ಕೆಯಾದ ಕೆ.ಎಂ.ಗಣೇಶ್ ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದೀಗ ಆ ಪಕ್ಷದಲ್ಲಿ ಅಸ್ತಿತ್ವ ಕಂಡುಕೊಳ್ಳುವದಕ್ಕಾಗಿ ನಗರಸಭೆಯ ಆಡಳಿತದ ವಿರುದ್ಧ ವಿನಾಕಾರಣ ಟೀಕೆ ಮಾಡುವ ಮೂಲಕ ಮತ್ತೊಂದು ಪ್ರಹಸನಕ್ಕೆ ಕೈ ಹಾಕಿದ್ದಾರೆ ಎಂದು ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ನಗರದ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಕ್ಕೆಂದು ರೂ.9 ಲಕ್ಷ ಬಿಡುಗಡೆಯಾಗಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಉಳಿದ ವಾರ್ಡ್‍ಗಳ ರಸ್ತೆಯನ್ನು ದುರಸ್ತಿ ಪಡಿಸಲು ಕ್ರಿಯಾ ಯೋಜನೆ ತಯಾರಾಗಿದ್ದು, ತಾಂತ್ರಿಕ ಅನುಮೋದನೆ ಪೂರ್ಣಗೊಂಡಿದೆ. ಟೆಂಡರ್ ಪ್ರಕ್ರಿಯೆ ಈ ವಾರದಲ್ಲಿ ಅಂತಿಮಗೊಂಡು ನಂತರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ತನ್ನ ರಾಜೀನಾಮೆಯನ್ನು ಕೇಳುವ ಯಾವ ನೈತಿಕತೆಯೂ ಗಣೇಶ್ ಅವರಿಗೆ ಇಲ್ಲವೆಂದು ಕಾವೇರಮ್ಮ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ಎಂದು ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರಾಗಿರುವದು ಯಾಕೆ ಎಂದು ಪ್ರಶ್ನಿಸಿರುವ ಅವರು, ಗಣೇಶ್ ಮೊದಲು ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ರಜಾಕ್ ಹೇಳಿಕೆ

ನಗರದ ಅಭಿವೃದ್ಧಿ ಬಗ್ಗೆ ಕಾಳಜಿ ತೋರದೆ ಹಗಲು ಕಾಂಗ್ರೆಸ್, ರಾತ್ರಿ ಬಿಜೆಪಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಕಮಲ ಕಾಂಗ್ರೆಸ್‍ನ ಗಣೇಶ್‍ಗೆ ನಗರದ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಈಗ ಜ್ಞಾನೋದಯವಾದಂತೆ ಕಂಡು ಬಂದಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ಪ್ರತಿಕ್ರಿಯಿಸಿದ್ದಾರೆ.

ಯುಜಿಡಿಯಿಂದ ರೂ. 49 ಕೋಟಿ ಖರ್ಚಾಗಿರುವದು ವ್ಯರ್ಥ ಎಂದು ಹೇಳಿಕೆ ನೀಡುವ ಗಣೇಶ್ ಅವರು, ನಗರಸಭಾ ಸದಸ್ಯರಾಗಿ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದಾಗ ಮೌನವಾಗಿ ಕಾಮಗಾರಿಗೆ ಸಮ್ಮತಿ ಸೂಚಿಸಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.