ಕುಶಾಲನಗರ, ಡಿ. 21: ಕುಶಾಲನಗರದ ರೈತಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಮತ್ತು ಶೈಕ್ಷಣಿಕ ವಿಚಾರಗೋಷ್ಠಿ-2017 ಕಾರ್ಯಕ್ರಮ ತೆರೆ ಕಂಡಿತು.

ಇಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಸಮ್ಮೇಳನ ಮತ್ತು ವಿಚಾರಗೋಷ್ಠಿ ಮೂಲಕ ವಿಚಾರ ವಿನಿಮಯ ಮತ್ತು ಜ್ಞಾನದ ಬೆಳೆವಣಿಗೆ ಅಧಿಕಗೊಳ್ಳುª Àದರೊಂದಿಗೆ ಬೋಧನೆ ಮಾಡಲು ಪ್ರಯೋಜನಕಾರಿ ಯಾಗುತ್ತದೆ.

ಸಮುದಾಯದ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆಗಳ ಪ್ರಗತಿಯನ್ನು ಉತ್ತಮಗೊಳಿಸಲು ಸರ್ಕಾರ ಅಧಿಕ ಅನುದಾನ ಹಾಗೂ ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದ್ಬಳಕೆ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧಿಸುವಂತೆ ಕರೆ ನೀಡಿದರು.

ಮಾಜಿ ಅರಣ್ಯ ಸಚಿವ ಬಿ.ಎ. ಜೀವಿಜಯ ಮಾತನಾಡಿ, ಜ್ಞಾನಭಂಡಾರವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಗುರುಗಳಿಗೆ ವಿದ್ಯಾರ್ಥಿಗಳು ಸದಾ ಗೌರವ ಸಲ್ಲಿಸುವದರೊಂದಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರಕುತ್ತದೆ. ಖಾಸಗಿ ಶಾಲೆಗಳ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ನಡೆಸಿಕೊಂಡು ಹೋಗುವದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಸಲ್ಲದು. ಗ್ರಾಮೀಣ ಶಾಲೆಗಳನ್ನು ಉಳಿಸಿಕೊಂಡು ಹೋಗುವದು ಪೋಷಕರು ಮತ್ತು ಶಿಕ್ಷಕರ ಕರ್ತವ್ಯವಾಗಿದೆ ಎಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ವಹಿಸಿದ್ದರು.

ಈ ಸಂದರ್ಭ ನಾಪಂಡ ಮುತ್ತಪ್ಪ, ಕೆ.ಕೆ. ಮಂಜುನಾಥ್ ಕುಮಾರ್, ಮಡಿಕೇರಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪಿ.ಲಕ್ಷ್ಮಿ, ಮೂರು ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಐಎನ್‍ಟಿಯೂಸಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್‍ಕುಮಾರ್, ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿ.ಪಂ ಸದಸ್ಯೆ ಪೂರ್ಣಿಮಾ ಗೋಪಾಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಎಸ್. ಪ್ರಸನ್ನಕುಮಾರ್, ತಾಲೂಕು ಶಾಲಾಭಿವೃದ್ಧಿ ಸಮಿತಿಯ ಸಮನ್ವಯ ವೇದಿಕೆಯ ಅಧ್ಯಕ್ಷರು ಗಳಾದ ದೇವಂಗೋಡಿ ರಾಮಚಂದ್ರ, ಜಿ.ಬಿ. ಸಿದ್ದಲಿಂಗಪ್ಪ, ನ್ಯಾನ್ಸಿ ಅಂತೋಣಿ, ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯೋಗೇಶ್, ಉಪಾಧ್ಯಕ್ಷ ಕೆ.ಬಿ. ಪ್ರಕಾಶ್, ಡಿ.ಕೆ. ರೇಖಾ, ಸೋಮವಾರಪೇಟೆ ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಟಿ.ಕೆ.ಬಸವರಾಜ್, ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ವಿವಿಧ ಜಿಲ್ಲಾ ಸಂಘಗಳ ಪ್ರಮುಖರು ಇದ್ದರು.