ಕೂಡಿಗೆ, ಡಿ. 21: ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ನೂತನವಾಗಿ ನಿರ್ಮಾಣಗೊಂಡಿರುವ ಮತ್ತು ಸಕಲ ಸೌಕರ್ಯಗಳನ್ನೊಳಗೊಂಡ ಸ್ಕ್ವಾಷ್ ಕೋರ್ಟ್ ಉದ್ಘಾಟನೆಯನ್ನು ತಾ. 23 ರಂದು ಬೆಳಿಗ್ಗೆ 10.30ಕ್ಕೆ ಏಷ್ಯನ್ ಮಹಿಳಾ ಸ್ಕ್ವಾಷ್ ಚಾಂಪಿಯನ್ ಜೋಷ್ನಾ ಚಿನ್ನಪ್ಪ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಮಟ್ಟದ ಬಾಸ್ಕೆಟ್ ಬಾಲ್ ಆಟಗಾರರಾದ ಪುಷ್ಟ ಕುಟ್ಟಣ್ಣ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಲೆಯ ಪ್ರಾಂಶುಪಾಲ ಕ್ಯಾಪ್ಟನ್ ಆರ್.ಆರ್. ಲಾಲ್ ಮತ್ತು ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಡಿ. ಮ್ಯಾಥ್ಯು ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗಿದೆ ಎಂದು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.