ಮಡಿಕೇರಿ, ಡಿ. 21: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ನಿರ್ದೇಶ ನಾಲಯ, ಬೆಂಗಳೂರು ವತಿಯಿಂದ 2017-18ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲು ವಿಳಂಬವಾಗಿದ್ದಲ್ಲಿ, ಕಾಲೇಜು ದಾಖಲಾತಿ ವಿಳಂಬವಾಗಿ ದ್ದಲ್ಲಿ ಹಾಗೂ ಕಾಲೇಜಿನ ಹೆಸರು ಎನ್‍ಎಸ್‍ಪಿ 2.0 ಸ್ಕಾಲರ್‍ಶಿಪ್ ಪೋರ್ಟಲ್‍ನಲ್ಲಿ ನೋಂದಾಯಿತ ವಾಗಿರದೆ ಇದ್ದಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸದಿದ್ದಲ್ಲಿ ಮಾತ್ರ ಅಂತಹ ವಿದ್ಯಾರ್ಥಿಗಳಿಗೆ ಆಫ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ ಅಥವಾ ತಾಲೂಕು ಮಾಹಿತಿ ಕೇಂದ್ರ ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಇಲ್ಲಿಂದ ಪಡೆದುಕೊಂಡು 2018ರ ಜನವರಿ 15 ರೊಳಗೆ ಈ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225628 ಹಾಗೂ ಇಲಾಖಾ ವೆಬ್‍ಸೈಟ್ ತಿತಿತಿ.goಞಜom. ಞಚಿಡಿ.ಟಿiಛಿ.iಟಿ ನಿಂದ ಮಾಹಿತಿ ಪಡೆದುಕೊಳ್ಳಬಹುದು.