ಸೋಮವಾರಪೇಟೆ, ಡಿ. 21: ತಥಾಸ್ತು ಸಾತ್ವಿಕ ಸಂಸ್ಥೆ ಮತ್ತು ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಕ್ತನಿಧಿ ಕೇಂದ್ರದ ವೈದ್ಯ ಕರುಂಬಯ್ಯ ಮಾತನಾಡಿ, ಪ್ರತಿಯೊಬ್ಬರೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಿದರೆ, ಹಲವು ಪ್ರಯೋಜನಗಳೊಂದಿಗೆ ಆರೋಗ್ಯ ವೃದ್ಧಿಸುತ್ತದೆ ಎಂದರು.
ತಥಾಸ್ತು ಸಂಸ್ಥೆಯ ಅಧ್ಯಕ್ಷ ಎನ್.ಬಿ. ರವೀಂದ್ರ ಮಾತನಾಡಿ, ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ಸಾಮಾಜಿಕ ಸೇವೆಯೊಂದಿಗೆ ರಕ್ತದಾನ ಶಿಬಿರವನ್ನು ನಡೆಸಿಕೊಂಡು ಬರುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಶಿಬಿರವನ್ನು ಆಯೋಜಿಸುವದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾನೂನು ಸಲಹೆಗಾರರಾದ ರೂಪಾ ಕಾಳಪ್ಪ, ಶಿವ, ಗಣೇಶ್ ಮರಗೋಡು, ಬಿ.ಶಿವಕುಮಾರ್, ಉಮೇಶ್, ಗುರುಮೂರ್ತಿ, ಇಲಾಖೆಯ ಕಮಲ, ಡಯಾನ ಹಾಗೂ ತಾಂತ್ರಿಕ ಸಿಬ್ಬಂದಿ ಸುನಿಲ್ ಮತ್ತಿತರರು ಇದ್ದರು.