ಮಡಿಕೇರಿ, ಡಿ. 21: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಮಡಿಕೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧಿಕಾರಿಗಳಿಗೆ ಸರಕು ಮತ್ತು ಸೇವಾ ತೆರಿಗೆ ಹಾಗೂ ಕೆ.ವೈ.ಸಿ. ಕುರಿತಾದ ಶಿಕ್ಷಣ ಕಾರ್ಯಕ್ರಮವನ್ನು ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಸಭಾಧ್ಯಕ್ಷತೆಯನ್ನು ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ವಹಿಸಿದ್ದರು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಬಿ.ಡಿ. ಮಂಜುನಾಥ್ ಉದ್ಘಾಟಿಸಿದರು. ಹಾಸನದ ಸನ್ನದು ಲೆಕ್ಕಿಗ ಎಸ್.ವಿ. ಶಂಭುಲಿಂಗಪ್ಪ ಬ್ಯಾಂಕ್‍ಗಳಿಗೆ ಅನ್ವಯವಾಗುವ ಸರಕು ಮತ್ತು ಸೇವಾ ತೆರಿಗೆ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಯೂನಿಯನ್ ನಿರ್ದೇಶಕರಾದ ಪ್ರೇಮ ಸೋಮಯ್ಯ, ಹೆಚ್.ಎನ್. ರಾಮಚಂದ್ರ, ಪಿ.ಸಿ. ಅಚ್ಚಯ್ಯ, ಡಿ.ಪಿ. ಬೋಪಣ್ಣ, ಉಪಸ್ಥಿತರಿದ್ದರು. ಯೂನಿಯನ್ ವ್ಯವಸ್ಥಾಪಕಿ ಆರ್. ಮಂಜುಳರವರು ಪ್ರಾರ್ಥಿಸಿದರು. ಯೂನಿಯನ್ ನಿರ್ದೇಶಕ ಕನ್ನಂಡ ಸಂಪತ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು.