ಮಡಿಕೇರಿ, ಡಿ. 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ತೆಕ್ಕಡೆ ಗುಲಾಬಿ ಜನಾರ್ಧನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾನಂಗಡ ಅರುಣ್, ಸಂಪನ್ಮೂಲ ವ್ಯಕ್ತಿಗಳಾಗಿ ಧನಂಜಯ ಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಮುಕುಂದ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ನೂರ್ ಜಹಾನ್ ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.