ಸೋಮವಾರಪೇಟೆ, ಡಿ. 22: ಐಗೂರಿನ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಐಗೂರು ಹಾಗೂ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ 50 ಫಲಾನುಭವಿಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಿತರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿದ್ದು, ಅದರ ಜತೆಗೆ ಬಡವರ ಹಾಗೂ ದೀನ ದಲಿತರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ದೇಶದ ಏಕೈಕ ಆಶಾಕಿರಣವಾಗಿ ಹೊರ ಹೊಮ್ಮಿದ್ದಾರೆ ಎಂದು ಅಭಿಪ್ರಾಯಪಟ್ಟರು. ಪಾರ್ವತಿ ಗ್ಯಾಸ್ ಏಜೆನ್ಸಿ ಮಾಲೀಕ ಎಸ್.ಎ. ಮುರಳೀಧರ್ ಉಜ್ವಲ ಯೋಜನೆಯ ಸದ್ಬಳಕೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ಸಬಿತ ಚನ್ನಕೇಶವ, ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಸ್. ಚಂಗಪ್ಪ, ಉಪಾಧ್ಯಕ್ಷೆ ಶೋಭಾ ಹೊನ್ನಪ್ಪ, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಏಜಣ್ಣ, ಸದಸ್ಯರುಗಳಾದ ಭರತ್‍ಕುಮಾರ್, ಗಣೇಶ್, ಐಗೂರು ಗ್ರಾಮ ಪಂಚಾ ಯಿತಿ ಸದಸ್ಯರುಗಳಾದ ಗೋಪಾಲ ಕೃಷ್ಣ, ಮಂಜುಳಾ, ಪಾಂಚಾಲಿ, ಪಾರ್ವತಿ ಗ್ಯಾಸ್ ಏಜೆನ್ಸಿ ವ್ಯವಸ್ಥಾಪಕ ಸತೀಶ್, ಸಿಬ್ಬಂದಿಗಳು ಇದ್ದರು.