ಸೋಮವಾರಪೇಟೆ,ಡಿ.22: ತಾಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ತಾ. 24ರಂದು(ನಾಳೆ) ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ತಾಲೂಕು ಅಧ್ಯಕ್ಷ ಶೋಭರಾಜ್ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 8 ಗಂಟೆಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, 9 ಗಂಟೆಯ ಒಳಗೆ ತಂಡಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ. ಪುರುಷರಿಗೆ ರಸ್ತೆ ಓಟ, 12 ವರ್ಷದೊಳಗಿನ ಮಕ್ಕಳಿಗೆ ಕಪ್ಪೆ ಜಿಗಿತ, ಗೋಣಿ ಚೀಲದ ಓಟ, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಹಗ್ಗ ಜಗ್ಗಾಟ, ಮೊಸರು ಕುಡಿಕೆ ಒಡೆಯುವದು, ಮಹಿಳೆಯರಿಗೆ ಥ್ರೋಬಾಲ್, ವಿಷದ ಚೆಂಡು, ಪುರುಷರಿಗೆ ವಾಲಿಬಾಲ್ ಪಂದ್ಯಾಟಗಳನ್ನು ಆಯೋಜಿಸಲಾಗಿದ್ದು, ಮಾಹಿತಿಗಾಗಿ 9480905049, 8277780591 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಶೋಭರಾಜ್ ಮನವಿ ಮಾಡಿದ್ದಾರೆ.