ಮಡಿಕೇರಿ, ಡಿ. 22: ಪ್ರಸಕ್ತ (2017-18ನೇ) ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್‍ಡಿ, ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್ ಹಾಗೂ ಶುಲ್ಕ ವಿನಾಯಿತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಜಿಯ ಪ್ರತಿ ಹಾಗೂ ಆನ್‍ಲೈನ್ ಅರ್ಜಿಯೊಂದಿಗೆ ಅಪ್-ಲೋಡ್ ಮಾಡಿರುವ ಎಲ್ಲಾ ದಾಖಲೆಗಳ ಒಂದು ಸೆಟ್ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಈ ಕಚೇರಿಗೆ ಸಲ್ಲಿಸಲು ತಿಳಿಸಿದೆ.

2017-18 ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್‍ಡಿ, ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುವ ಮಾಸಿಕ ರೂ: 5 ಸಾವಿರ ವ್ಯಾಸಂಗ ವೇತನ-ಫೆಲೋಶಿಫ್ ಹಾಗೂ ನಿಗದಿತ ಶುಲ್ಕ ವಿನಾಯಿತಿಗಾಗಿ ಈ ಹಿಂದೆ ಆಯ್ಕೆಯಾಗಿದ್ದು ಪ್ರಸ್ತುತ ಸಾಲಿನಲ್ಲಿ ಮುಂದುವರಿಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ ಏಪ್ರಿಲ್ 4 ರಿಂದೀಚೆಗೆ ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿ.ಎಚ್‍ಡಿ, ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಂದ ಈ ಮೊದಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಏಪ್ರಿಲ್ 4 ರಿಂದ ಹಿಂದೆ ಪೂರ್ಣಾವಧಿ ಪಿ.ಎಚ್‍ಡಿ, ಅಧ್ಯಯನದಲ್ಲಿ ತೊಡಗಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳು ಸಹ ಈಗ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ 2, 3 ಮತ್ತು 4ನೇ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮೊದಲು ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸದಿದ್ದಲ್ಲಿ ಈಗ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ನೋಡಬಹುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.