ಕೂಡಿಗೆÀ, ಡಿ. 22: ಜಿಲ್ಲಾ ಗಡಿಭಾಗವಾದ ಶಿರಂಗಾಲದಿಂದ ಕುಶಾಲನಗರದವರೆಗೆ ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‍ನ (ಐ.ಎನ್.ಟಿ.ಯು.ಸಿ.) ವತಿಯಿಂದ ಪಾದಯಾತ್ರೆಗೆ ಇಂದು ಬೆಳಿಗ್ಗೆ ರಾಷ್ಟ್ರೀಯ ಮಜ್ದೂರು ಕಾಂಗ್ರೆಸ್‍ನ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಪ್ರಬಲವಾಗಿದ್ದು ಬಲಶಾಲಿಯಾಗಿದೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸುವ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅನುಕೂಲಕರವಾಗಲಿದೆ ಎಂದರು.
ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹಸೈನರ್ ಹಾಜಿ. ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕೊಬ್, ಪ್ರಮುಖರಾದ ವಿರುಪಾಕ್ಷಯ್ಯ ಚಂದ್ರಶೇಖರ್ ಇದ್ದರು.