ಮಡಿಕೇರಿ, ಡಿ. 22: ಪೊನ್ನಂಪೇಟೆಯಲ್ಲಿ ಇತ್ತೀಚೆಗೆ ನಡೆದ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಂತಿಮ ಸಭೆ ಮತ್ತು ಲೆಕ್ಕಪತ್ರ ಮಂಡನಾ ಸಭೆ ತಾ. 27ರಂದು ಮಧ್ಯಾಹ್ನ 2.30 ಗಂಟೆಗೆ ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ಶಾಸಕರು ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ವೀರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.