ಮಡಿಕೇರಿ, ಡಿ. 24: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಕೃಷಿಕ ಸಮಾಜ, ಕೃಷಿ ವಿಸ್ತರಣಾ ಘಟಕ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಸಂಶೋಧನಾ ಕೇಂದ್ರದಲ್ಲಿ ರೈತ ದಿನಾಚರಣೆ ನಡೆಯಿತು.ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾ ಮೋಹನ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾರುಗುಂದದ ಪ್ರಗತಿಪರ ರೈತ ಮಹಿಳೆ ಸರೋಜಿನಿ ದೇವಯ್ಯ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೃಷಿ ಪಂಡಿತ ಪ್ರಶಸ್ತಿ ವಿಜೇತ ಮಂದ್ರಿರ ತೇಜಸ್ ನಾಣಯ್ಯ, ಕೃಷಿಕ ಸಮಾಜದ ನಿರ್ದೇಶಕರಾದ ಮುಂಡಂಡ ಕುಟ್ಟಪ್ಪ, ಚಟ್ರಂಡ ತಿಮ್ಮಯ್ಯ ಪಾಲ್ಗೊಂಡಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಮಂಜುನಾಥ್, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಸಿ.ಜಿ. ಕುಶಾಲಪ್ಪ, ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಅಜ್ಜಿಕುಟ್ಟಿರ ಗಿರೀಶ್ ಮತ್ತಿತರರು ಇದ್ದರು. ಮುಕ್ಕಾಟಿ ಪಾರ್ವತಿ ಪ್ರಾರ್ಥಿಸಿದರು. ಸಮಾರಂಭಕ್ಕೂ ಮುನ್ನ ಹೂ ಗಿಡಗಳು ಹಾಗೂ ತರಕಾರಿ ಬೆಳೆಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಅರಿವು ಮೂಡಿಸಲಾಯಿತು.