ಸೋಮವಾರಪೇಟೆ, ಡಿ. 24: ಕಕ್ಕೆಹೊಳೆ ಸಮೀಪದಲ್ಲಿನ ಶ್ರೀ ಮುತ್ತಪ್ಪ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ತಾ. 26ರ ಮಂಗಳವಾರ ಅಯ್ಯಪ್ಪಸ್ವಾಮಿಯ ಮಂಡಲಪೂಜೋತ್ಸವ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ 4 ಗಂಟೆಗೆ ಗಣಪತಿ ಹೋಮ ನಡೆಯಲಿದ್ದು, 9 ಗಂಟೆಯಿಂದ ಅಯ್ಯಪ್ಪಸ್ವಾಮಿಗೆ ತುಪ್ಪಾಭಿಷೇಕ, ಭಸ್ಮಾಭಿಷೇಕ, ಪಂಚಾಮೃತ ಅಭಿಷೇಕ, ಜೇನಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳು ನಡೆಯಲಿದೆ.

ಸಂಜೆ 6 ಗಂಟೆಗೆ ಪಡಿಪೂಜೆ ನಡೆದು, 7 ಗಂಟೆಗೆ ಪುಷ್ಪಾರ್ಚನೆ, 7.45ಕ್ಕೆ ದೀಪಾರಾಧನೆ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, 8.30ಕ್ಕೆ ಹರಿವಾಸನಂ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ. ವಿನೋದ್ ತಿಳಿಸಿದ್ದಾರೆ.