ಸಿದ್ದಾಪುರ, ಡಿ. 24: ಮುಂದಿನ ಚುನವಾಣೆಯಲ್ಲಿ ಜೆ.ಡಿ.ಎಸ್ ಪಕ್ಷವು ಅಧಿಕಾರಕ್ಕೆ ಬರುವ ಮೂಲಕ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಬಿ.ಎ. ಜೀವಿಜಯನವರು ಆಡಳಿತ ನಡೆಸಲಿದ್ದಾರೆಂದು ಜಿಲ್ಲಾ ಜೆ.ಡಿ.ಎಸ್. ಪಕ್ಷದ ಅಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರ್ನಾಡು ಸಮೀಪದ ಬಲಮುರಿಯಲ್ಲಿ ಜೆ.ಡಿ.ಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನ ಸೇರಿದಂತೆ ಸಾರಾಯಿ ಹಾಗೂ ಲಾಟರಿ ನಿಷೇಧ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ಮುಂಬರುವ ವಿಧಾನ ಸಭಾ ಚುನವಾಣೆಯಲ್ಲಿ ಜೆ.ಡಿ.ಎಸ್. ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಆಯ್ಕೆಯಾಗಲಿದ್ದಾರೆ. ಅಲ್ಲದೇ ಮಡಿಕೇರಿ ಕ್ಷೇತ್ರದಲ್ಲಿ ಜೀವಿಜಯ ನವರು ಅತ್ಯಧಿಕ ಮತಗಳಿಂದ ಜಯಗಳಿಸುವ ಬಗ್ಗೆ ಈಗಾಗಲೇ ಗುಪ್ತಚರ ಇಲಾಖೆಯು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರ ಗೆಲವು ಖಚಿತವೆಂದರು.

ಜಿಲ್ಲಾ ಜೆ.ಡಿ.ಎಸ್. ಅಲ್ಪಸಂಖ್ಯಾತರ ಘಟಕದ ಮುಖಂಡ ಇಸಾಕ್ ಮಾತನಾಡಿ, ಜಿಲ್ಲೆಯ ಶಾಸಕರುಗಳು ಅಭಿವೃದ್ಧಿ ಮಾಡದೇ ರಾಜಕೀಯದಲ್ಲಿ ಕಾಲಹರಣ ಮಾಡುತ್ತಿದ್ದಾರೆಂದು ಆರೋಪಿಸಿದರು. ರಾಜ್ಯ ಸರ್ಕಾರವು ಅನಗತ್ಯವಾಗಿ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಅಮಾಯಕರ ಮೇಲೆ ಕೇಸುಗಳು ದಾಖಲಾಗಿ ನ್ಯಾಯಾ ಲಯಕ್ಕೆ ಅಲೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತರಿಗೆ ಯಾವದೇ ಪ್ರಯೋಜನ ಆಗಿಲ್ಲ; ಯೋಜನೆಗಳು ಜಾರಿಗೆ ಆಗಿರುವದಿಲ್ಲವೆಂದು ಟೀಕಿಸಿದರು. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನವಾಣೆಯಲ್ಲಿ ಜೆ.ಡಿ.ಎಸ್. ಅಧಿಕಾರಕ್ಕೆ ಬರುವದು ಖಚಿತ ಎಂದರು.

ಜೆ.ಡಿ.ಎಸ್. ಪಕ್ಷದ ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ ಮಾತನಾಡಿ, ಬಿ.ಜೆ.ಪಿ. ಕೋಮುವಾದಿ ಪಕ್ಷವಾಗಿದ್ದು, ಜಾತಿಯ ಹೆಸರಿನಲ್ಲಿ ಪರಸ್ಪರ ಕಂದಕ ನಿರ್ಮಾಣ ಮಾಡಿ ಕೋಮುಗಲಭೆ ಸೃಷ್ಟಿ ಮಾಡುತ್ತಿದ್ದಾ ರೆಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಕಮಲ ಕಾಂಗ್ರೆಸಿಗರಿದ್ದು, ಅವರು ಜಿಲ್ಲೆಯಲ್ಲಿ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಆರೋಪಿಸಿದರು. ಜಿಲ್ಲೆಯ ಶಾಸಕ ರುಗಳು ಹಣ ಬಲದಿಂದ ಮುಂಬ ರುವ ಚುನವಾಣೆಯಲ್ಲಿ ಜಯಗಳಿಸಲು ಪ್ರಯತ್ನಿಸುತ್ತಿದ್ದು, ಈ ಬಗ್ಗೆ ಕಾರ್ಯ ಕರ್ತರು ಎಚ್ಚರ ವಹಿಸಬೇಕೆಂದ ಅವರು, ಜೆ.ಡಿ.ಎಸ್. ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕೆಂದರು. ಸಭೆಯಲ್ಲಿ ಜೆ.ಡಿ.ಎಸ್. ಪಕ್ಷದ ಮುಖಂಡರು ಗಳಾದ ಮನ್ಸೂರ್, ಪಾರೆಮಜಲು, ಕುಸುಮ್, ಕಾರ್ಯಪ್ಪ, ಗೌತಮ್, ನೈಹೀಂ, ಸಕ್ಲೆನ್, ಸಾದ್ದಿಕ್, ನಾಣಯ್ಯ, ಮೋಹನ್, ಮಹಮ್ಮದ್, ಇತರರು ಹಾಜರಿದ್ದರು.

ಮೂರ್ನಾಡು : ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಕಾರ್ಯ ಕರ್ತರ ಸಭೆ ಪಟ್ಟಣದ ಸಮುದಾಯ ಭವನದಲ್ಲಿ ಜೆಡಿಎಸ್ ಮೂರ್ನಾಡು ಹೋಬಳಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷÀ ನಹೀಮ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಗೆ ಆಗಮಿಸಿದ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಸಮಿತಿ ಅಧ್ಯಕ್ಷ ಇಷಾಕ್ ಮಾತನಾಡಿ ಇಷ್ಟು ವರ್ಷಗಳಿಂದ ಎರಡು ಸರ್ಕಾರಗಳು ಅಲ್ಪ ಸಂಖ್ಯಾತರನ್ನು ಚುನಾವಣೆಯಲ್ಲಿ ಮತಕ್ಕಾಗಿ ಬಳಸಿಕೊಂಡು ಸೌಲಭ್ಯಗಳನ್ನು ನೀಡದೆ ಕೇವಲ ಪ್ರಚಾರದಲ್ಲಿಯೇ ಕಾಲಕಳೆಯುತ್ತಿವೆ. ಕಾಂಗ್ರೆಸ್, ಬಿಜೆಪಿ ಪಕ್ಷವು ಅಲ್ಪಸಂಖ್ಯಾತರರನ್ನು, ಹಿಂದುಳಿದ ವರ್ಗದವರನ್ನು ಕಡೆಗಣಿಸುತ್ತಿದೆ. ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಯುವಕರು ಪಣತೋಡಬೇಕಾಗಿದೆ ಎಂದು ಕರೆನೀಡಿದರು.

ಸಭೆಯನ್ನುದ್ದೇಶಿಸಿ ಸಂಘಟನಾ ಕಾರ್ಯದರ್ಶಿ ಮನ್ಸೂರು ಆಲಿ, ವರ್ತಕರ ಕ್ಷೇತ್ರದ ಜಿಲ್ಲಾಧ್ಯಕ್ಷ ಕುಸುಮ್ ಕಾರ್ಯಪ್ಪ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಉಪಾಧ್ಯಕ್ಷ ಕೆ.ಎಂ. ಗಫೂರ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎ. ಜಾಶಿರ್, ವೀರಾಜಪೇಟೆ ಕ್ಷೇತ್ರದ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಆಶಿಫ್, ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ರಶೀದ್ ಇತರರು ಹಾಜರಿದ್ದರು. ಈ ಸಂದರ್ಭ ಮೂರ್ನಾಡು ಹೋಬಳಿ ಅಲ್ಪ ಸಂಖ್ಯಾತ ಘಟಕವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ನಹೀಮ್, ಉಪಾಧ್ಯಕ್ಷರಾಗಿ ಕೆ.ಹೆಚ್. ಜುಬೇರ್, ಎಂ.ಎಲ್. ಹಾರೀಸ್, ಟಿ.ಎಂ. ಜಿಸನ್ ಆಲಿ, ಮಹಾ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಇಸ್ಮಾಯಿಲ್, ಸಹ ಕಾರ್ಯ ದರ್ಶಿ ಎಂ.ಪಿ. ನಯಾಜ್, ಪಿ.ಎಸ್. ರಿಯಾಜ್, ಸಂಘಟನಾ ಕಾರ್ಯದರ್ಶಿ ಎಂ.ಎಂ. ಸುಹೈಲ್, ಪಿ.ಎಂ. ರಶೀದ್ ಅವರುಗಳಿಗೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಲಾಯಿತು.