ಸೋಮವಾರಪೇಟೆ, ಡಿ.25: ಕೊಡಗಿನ ಪರಂಪರೆಯನ್ನು ಇಂದಿನ ಯುವ ಜನಾಂಗಕ್ಕೆ ತಿಳಿಸುವ ಕಾರ್ಯ ಆಗಬೇಕು. ನೆಲದ ಸಂಸ್ಕøತಿಯನ್ನು ಉಳಿಸಿ ಬೆಳೆಸುವತ್ತ ಎಲ್ಲರೂ ಜವಾಬ್ದಾರಿ ಹೊರಬೇಕು ಎಂದು ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಹೇಳಿದರು.
ಇಲ್ಲಿನ ಕೊಡವ ಸಮಾಜದ ಆಶ್ರಯದಲ್ಲಿ ನಡೆದ ಪುತ್ತರಿ ಊರೋರ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗಿನ ಇತಿಹಾಸ, ಸಂಸ್ಕøತಿ, ಪರಂಪರೆ ಮತ್ತು ವೀರ ಸೈನಿಕರ ಪರಾಕ್ರಮ ಹಾಗೂ ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳಿಗೆ ಪೋಷಕರು ತಿಳಿಸುವಂತಹ ಕೆಲಸ ಆಗಬೇಕು ಎಂದು ಸುನಿಲ್ ಸುಬ್ರಮಣಿ ಅಭಿಪ್ರಾಯಿಸಿದರು.
ಸೋಮವಾರಪೇಟೆ ಕೊಡವ ಸಮಾಜದ ಅಭಿವೃದ್ಧಿಗೆ 2.5ಲಕ್ಷ ಅನುದಾನ ಹಾಗೂ ಸಮಾಜದ ವಿದ್ಯಾ ನಿಧಿಗೆ ವೈಯಕ್ತಿಕವಾಗಿ ರೂ. 25 ಸಾವಿರ ಧನ ಸಹಾಯ ನೀಡುವದಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಮಾತನಾಡಿ, ಕೊಡಗಿನಲ್ಲಿ ಕೊಡವರು ಅಲ್ಪಸಂಖ್ಯಾತರಾಗುತ್ತಿದ್ದಾರೆ. ಇಲ್ಲಿನ ಮೂಲ ನಿವಾಸಿಗಳು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಪಟ್ಟಣದಲ್ಲಿ ಹೋಗಿ ನೆಲೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವದು ವಿಪರ್ಯಾಸ ಎಂದರು.
ಇದೇ ಸಂದರ್ಭ ಸಮಾಜದ ಹಿರಿಯ ಸದಸ್ಯರಾದ ಕೆ. ಅಯ್ಯಪ್ಪ ಮತ್ತು ಕÀಲ್ಲೇಂಗಡ ಅಪ್ಪಚ್ಚುg Àವರುಗಳನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಬಾಚಿನಾಡಂಡ ರೀಟಾ ಕುಶಾಲಪ್ಪ ಉಪಸ್ಥಿತರಿದ್ದರು.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ತಾಂತ್ರಿಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತ್ಯಧಿಕ ಅಂಕಗಳಿಸಿದ ಸಮಾಜದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು. ಗರ್ವಾಲೆಯ ಬೊಟ್ಲಪ್ಪ ಯುವಕ ಸಂಘದ ಬೊಳಕ್ಕಾಟ್, ಕೋಲಾಟ ಉಮ್ಮತ್ತಾಟ್, ಪರೆಯಕಳಿ ಹಾಗೂ ಸೋಮವಾರಪೇಟೆ ಕೊಡವ ಸಮಾಜದ ವತಿಯಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.