ಮಡಿಕೇರಿ, ಡಿ. 25: ಡಾ. ಅಂಬೇಡ್ಕರ್ ಅವರ ಬಗ್ಗೆ ಕೀಳಾಗಿ ಸಂದೇಶಗಳನ್ನು ಕಳುಹಿಸಿದ ವ್ಯಕ್ತಿಯನ್ನು ತಕ್ಷಣ ಬಂಧಿಸಿ, ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ವಿ. ಕೆ. ಸತೀಶ್ಕುಮಾರ್ ಅವರು, ‘ಏಕಾಂಗಿ ಹುಡುಗರು’ ಎಂಬ ಹೆಸರಿನಲ್ಲಿ ‘ವಾಟ್ಸ್ಆಪ್’ನಲ್ಲಿ ಗ್ರೂಪ್ ರಚಿಸಿ ಅದರಲ್ಲಿ ಭಾರತದ ಸಂವಿಧಾನ ಹಾಗೂ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ ಬಗ್ಗೆ ಕೀಳು ಅಭಿರುಚಿಯ ಸಂದೇಶಗಳನ್ನು ರವಾನಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದಲಿತ ಸಂಘಟನೆ ಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಯ ವಿರುದ್ಧ ದೂರು ಸಲ್ಲಿಸಿದ್ದರೂ, ಆರೋಪಿ ಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರವಿದ್ದರೂ, ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಕೇವಲವಾಗಿ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಪೊಲೀಸರು ಇನ್ನೂ ಬಂಧಿಸದಿರುವದು ವಿಷಾದನೀಯ ಎಂದರು.
ಘಟಕದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸುರೇಶ್ ಮಾತನಾಡಿ, ಕಾನೂನು ಬಲವಾಗಿ ದ್ದರೂ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುವದ ರಿಂದ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಅಂತಹ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತಾಗ ಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಘಟಕದ ಜಿಲ್ಲಾ ಕಾರ್ಯದರ್ಶಿ ಗಾಯತ್ರಿ ನರಸಿಂಹ, ಸದಸ್ಯರಾದ ವಿಶ್ವನಾಥ್ ಹಾಗೂ ಡಿಸಿಸಿ ಸದಸ್ಯರಾದ ಪುಟ್ಟಲಕ್ಷ್ಮಿ ಹಾಜರಿದ್ದರು.