ಶನಿವಾರಸಂತೆ, ಡಿ. 25: ಸಮೀಪದ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಂಡ್ಲಿ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ವಲಯದ ಪ್ರಾಥಮಿಕ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಕಾರ್ಯಾಗಾರ ಉದ್ಘಾಟಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಿಜಯಕುಮಾರ್ ಹಾಗೂ ಗೌಡಳ್ಳಿ ಸಮೂಹ ಸಂಪನ್ಮೂಲ ವ್ಯಕ್ತಿ ಜವರಯ್ಯ ತರಬೇತಿ ನೀಡಿದರು.
ಹಂಡ್ಲಿ ಕ್ಲಸ್ಟರ್ನ ಸಂಪನ್ಮೂಲ ವ್ಯಕ್ತಿ ಮಧುಕುಮಾರ್, ನಿಡ್ತ ಶಾಲೆ ಮುಖ್ಯ ಶಿಕ್ಷಕಿ ಯಶೋದಾ, ಎಸ್ಡಿಎಂಸಿ ಅಧ್ಯಕ್ಷ ರವಿಕುಮಾರ್, ಹಂಡ್ಲಿ ಶಾಲೆಯ ಮುಖ್ಯ ಶಿಕ್ಷಕ ಅಪ್ಪಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಪುಟ್ಟಯ್ಯ, ಹಾರೆಹೊಸೂರು ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ, ಎಸ್ಡಿಎಂಸಿ ಅಧ್ಯಕ್ಷೆ ಹೂವಮ್ಮ, ಚಂದ್ರಶೇಖರ್, ವಿವಿಧ ಶಾಲಾ ಮುಖ್ಯ ಶಿಕ್ಷಕರು, ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.