ಮಡಿಕೇರಿ, ಡಿ. 25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಆಯೋಜಿಸಲಿದ್ದು, ಈ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಮಕ್ಕಳಿಂದಲೇ ಆಯೋಜಿಸಲು ಉದ್ದೇಶಿಸಲಾಗಿದೆ. ಸಾಹಿತ್ಯ ಹಾಗೂ ಕಲೆಯಲ್ಲಿ ಆಸಕ್ತಿಯಿರುವ 16 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳು ಕವಿಗೋಷ್ಠಿ, ವಿಚಾರಗೋಷ್ಠಿ ಹಾಗೂ ಸಮ್ಮೇಳನದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದಾಗಿದೆ. ಒಂದು ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಬಹುದಾಗಿದ್ದು, ಸಾಹಿತ್ಯ ಹಾಗೂ ಕಲೆಯಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಸಂಪರ್ಕ ದೂರವಾಣಿ ಯೊಂದಿಗೆ ವಿವರವನ್ನು ಜನವರಿ 1 ರೊಳಗೆ ಮಡಿಕೇರಿ ಕೋಟೆ ಆವರಣ ದಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಕಚೇರಿಗೆ ಕಳುಹಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ -9742632283, 8277066123 ಸಂಪರ್ಕಿಸಬಹುದು.