ಕೂಡಿಗೆ, ಡಿ. 25: ಕೂಡಿಗೆಯ ಶ್ರೀ ಸತ್ಯನಾರಾಯಣ ವ್ರತಾಚರಣಾ ಸಮಿತಿ ವತಿಯಿಂದ ಶ್ರೀ ಉದ್ಭವ ಸುಬ್ರಹ್ಮಣ್ಯ ದೇವಾಲಯದ ಆವರಣದಲ್ಲಿ ಕಿರುಷಷ್ಠಿಯ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಇದರ ಅಂಗವಾಗಿ ಗಣಪತಿ ಹೋಮ, ನವಗ್ರಹ ಪೂಜೆ, ಅಭಿಷೇಕ ನಡೆದು, ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.
ಮಹಾಮಂಗಳಾರತಿ ಪ್ರಸಾದ ವಿತರಣೆ ಕಾರ್ಯಕ್ರಮದ ನಂತರ ಪೂಜೆಯ ಅಂಗವಾಗಿ ಅನ್ನ ಸಂತರ್ಪಣೆ ಮಾಡಲಾಯಿತು. ಪೂಜಾ ಕಾರ್ಯಗಳು ಕೂಡಿಗೆ ಶ್ರೀ ಉದ್ಭವ ಸುಬ್ರಹ್ಮಣ್ಯ ದೇವಾಲಯದ ಅರ್ಚಕ ನವೀನ್ಭಟ್ ಅವರ ನೇತೃತ್ವದಲ್ಲಿ ನೆರವೇರಿದವು. ಸಂಜೆ 6.45 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.