ಕುಶಾಲನಗರ, ಡಿ. 25: ಕುಶಾಲನಗರ ವಿವೇಕಾನಂದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಿವೇಕಾನಂದ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅಧ್ಯಕ್ಷತೆ ಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಕೃಷಿ ತಜ್ಞ ಡಾ. ವಿಜಯ ಅಂಗಡಿ ಅವರು ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಎಂ. ನಾಗೇಶ್, ವಿಶೇಷ ಬೋಧನೆ ಮೂಲಕ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ತಯಾರಿ ಮಾಡಲಾಗುತ್ತದೆ. ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಾಧ್ಯಾಪಕರ ಮತ್ತು ಆಡಳಿತ ಮಂಡಳಿ ದಿನನಿತ್ಯ ತರಗತಿಗಳಲ್ಲಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದರು. ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರದ ಜ್ಞಾನಭಾರತಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಜಿ.ಎಲ್. ನಾಗರಾಜ್ ಮತ್ತು ಕರ್ನಾಟಕ ವಿಜ್ಞಾನ ಪರಿಷತ್ ಜಿಲ್ಲಾ ಅಧ್ಯಕ್ಷ ಫಿಲಿಪ್‍ವಾಸ್ ಹಿತವಚನಗಳನ್ನಾಡಿ ದರು. ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.