ಸಿದ್ದಾಪುರ, ಡಿ. 26: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಅಮ್ಮತ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.
ಅಮ್ಮತ್ತಿಯ ಅರ್ಚಕ ಗುರುರಾಜ್ ಭಟ್ಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ವಿ.ಎ. ¯ಕ್ಷಿನಾರಾಯಣ ಧಾರ್ಮಿಕ ಉಪನ್ಯಾಸ ನೀಡಿದರು.
ಈ ಸಂದರ್ಭ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಸುಬ್ರಮಣಿ, ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಸದಾಶಿವ, ಪೂಜಾ ಸಮಿತಿ ಅಧ್ಯಕ್ಷೆ ಯಶೋದ, ಸಂಘದ ಸೇವಾ ಪ್ರತಿನಿಧಿಗಳು, ಸದಸ್ಯರುಗಳು ಇದ್ದರು.