ಸೋಮವಾರಪೇಟೆ, ಡಿ. 26: ತಾಲೂಕಿನಾದ್ಯಂತ ಯುವಕ ಸಂಘ-ಯುವತಿ ಮಂಡಳಿಗಳನ್ನು ರಚಿಸಿ ಕ್ರಿಯಾಶೀಲವಾಗಿ ಕಾರ್ಯಾಚರಿಸುತ್ತಿ ರುವ ಯುವ ಒಕ್ಕೂಟಕ್ಕೆ ಸ್ವಂತ ನಿವೇಶನ ಕಲ್ಪಿಸಲು ಜನಪ್ರತಿನಿಧಿಗಳು ಮುಂದಾಗಬೇಕೆಂದು ಒಕ್ಕೂಟದ ತಾಲೂಕು ಅಧ್ಯಕ್ಷ ಶೋಭರಾಜ್ ಮನವಿ ಮಾಡಿದರು. ತಾಲೂಕು ಯುವ ಒಕ್ಕೂಟದ ವತಿಯಿಂದ ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರೀಡೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್ ಮಾತನಾಡಿ, ಯುವ ಜನಾಂಗವನ್ನು ಸಮಾಜದ ಆಸ್ತಿಯಾಗಿ ರೂಪಿಸುವ ನಿಟ್ಟಿನಲ್ಲಿ ಒಕ್ಕೂಟಗಳು ಶ್ರಮವಹಿಸಬೇಕು ಎಂದರು. ತಾಲೂಕು ಪಂಚಾಯಿತಿ ಸದಸ್ಯೆ ತಂಗಮ್ಮ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅವರುಗಳು ಮಾತನಾಡಿದರು. ವೇದಿಕೆಯಲ್ಲಿ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಡಿ. ಹರೀಶ್, ಮಾಜಿ ಅಧ್ಯಕ್ಷ ಎಂ. ಪಿ. ರವಿ ಉಪಸ್ಥಿತರಿದ್ದರು. ಯುವ ಒಕ್ಕೂಟದ ಕಾರ್ಯದರ್ಶಿ ಚಂದ್ರಿಕಾ, ಪದಾಧಿಕಾರಿಗಳಾದ ಅಯ್ಯಪ್ಪ, ರಾಜು ಅವರುಗಳು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ನಂತರ ಪುರುಷರಿಗೆ ರಸ್ತೆ ಓಟ, 12 ವರ್ಷದೊಳಗಿನ ಮಕ್ಕಳಿಗೆ ಕಪ್ಪೆ ಜಿಗಿತ, ಗೋಣಿ ಚೀಲದ ಓಟ, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಹಗ್ಗ ಜಗ್ಗಾಟ, ಮೊಸರು ಕುಡಿಕೆ ಒಡೆಯುವದು, ಮಹಿಳೆಯ ರಿಗೆ ಥ್ರೋಬಾಲ್, ವಿಷದ ಚೆಂಡು, ಪುರುಷರಿಗೆ ವಾಲಿಬಾಲ್ ಪಂದ್ಯಾಟ ಗಳು ನಡೆದವು.